ಉಚಿತ ಕನ್ನಡ ತಾಯಿ ತೈಲಚಿತ್ರ

ಪೂರ್ಣ ಆಚಾರ್ಯ, ಕೋಟೆಕಾರ್, ಕಲಾವಿದರು
ಕರ್ನಾಟಕ ರಾಜ್ಯವು
೫೦ ವರ್ಷ ಪೂರೈಸಿದ
ಪ್ರಯುಕ್ತ
ನವೆಂಬರ್ 1, 1973 ರಂದು ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು.
ನಾಡಿಗೊಂದು ಅಧಿದೇವತೆ, ಭಾಷೆಗೊಂದು ಸುಂದರ ಲಾಂಛನವನ್ನು ಹೊಂದಿರುವ ಅಪರೂಪದ ಭಾಷೆ ಕನ್ನಡ. ಕನ್ನಡಿಗರೆಲ್ಲ ಹೆಮ್ಮೆಪಡಬಹುದಾದ ವಿಷಯ. ಕನ್ನಡ ಭಾಷೆಯ ನೆಲ, ಜಲ, ನುಡಿಗಾಗಿ ಕದಂಬರ ಅರಸ ವೀರ ಮಯೂರನಿಂದಾಗಿ ಸ್ವಾಭಿಮಾನಿ ರಾಜ್ಯ ನಿರ್ಮಾಣವೇ ನಡೆದು ಹೋದ ಅಪರೂಪದ ಇತಿಹಾಸ ಕನ್ನಡ ನಾಡಿನದ್ದು.ಇಂದಿಗೂ ಈ ನೆಲ ಕನ್ನಡದ ಕುಲದೇವಿಯನ್ನ ಮಡಿಲಲ್ಲಿಟ್ಟುಕೊಂಡು, ಕನ್ನಡತನವನ್ನ ಎದೆಯ ಗುಂಡಿಗೆಯಲ್ಲಿ ತುಂಬಿಟ್ಟು ಉಸಿರಾಡುತ್ತಿದೆ.